ಮುಂಬೈ: ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಮೇಲೆ ಡ್ರಗ್ ಸೇವನೆ, ಮಾರಾಟ ಆರೋಪ ಹೊರಿಸಲಾಗಿದೆ. ನಿನ್ನೆ ತಡರಾತ್ರಿ ಮುಂಬೈನಲ್ಲಿ ಐಷಾರಾಮಿ ಹಡಗೊಂದರಲ್ಲಿ ರೇವ್ ಪಾರ್ಟಿ ನಡೆಯುತ್ತಿದ್ದಾಗ ಎನ್ ಸಿಬಿ ಅಧಿಕಾರಿಗಳು ದಾಳಿ ನಡೆದಿದ್ದರು. ಈ ಸಂದರ್ಭದಲ್ಲಿ ಆರ್ಯನ್ ಸೇರಿದಂತೆ 10 ಮಂದಿಯನ್ನು ಬಂಧಿಸಲಾಗಿತ್ತು.ಇದೀಗ ಆರೋಪಿಗಳ ವಿರುದ್ಧ ಡ್ರಗ್ ಸೇವನೆ, ಮಾರಾಟ ಪ್ರಕರಣ ದಾಖಲಿಸಲಾಗಿದೆ. ಈ ಎಲ್ಲರನ್ನೂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಶಾರುಖ್ ಪುತ್ರ ಹಾಗೂ ಇತರರ