ಮುಂಬೈ : ಬಾಲಿವುಡ್ ನ ಹಿರಿಯ ನಟ ದಿಲೀಪ್ ಕುಮಾರ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶ್ವಾಸಕೋಸದ ಇನ್ಫೆಕ್ಷನ್ ನಿಂದ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದ ಕಾರಣ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ದಿಲೀಪ್ ಕುಮಾರ್ ಅವರ ಅಧಿಕೃತ ಟ್ವೀಟರ್ ಖಾತೆಯಲ್ಲಿ ಮಾಹಿತಿ ನೀಡಲಾಗಿದೆ. ಈ ಸುದ್ದಿ ಕೇಳಿ ಆತಂಕಗೊಂಡ ದಿಲೀಪ್ ಕುಮಾರ್ ಅಭಿಮಾನಿಗಳು ಆದಷ್ಟು ಬೇಗ ಅವರು ಗುಣಮುಖರಾಗಿ