ದೀಪಿಕಾ ಪಡುಕೋಣೆ ಇಡೀ ಕುಟುಂಬಕ್ಕೆ ಕೊರೋನಾ ಸೋಂಕು

ಬೆಂಗಳೂರು| Krishnaveni K| Last Modified ಬುಧವಾರ, 5 ಮೇ 2021 (10:49 IST)
ಬೆಂಗಳೂರು: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ, ಅವರ ತಂದೆ, ಬ್ಯಾಡ್ಮಿಂಟನ್ ಆಟಗಾರ ಪ್ರಕಾಶ್ ಪಡುಕೋಣೆ ಸೇರಿದಂತೆ ಇಡೀ ಕುಟುಂಬಕ್ಕೆ ಕೊರೋನಾ ಸೋಂಕು ತಗುಲಿದೆ.
 > ಪ್ರಕಾಶ್ ಪಡುಕೋಣೆ ಅವರಿಗೆ ಸೋಂಕು ತಗುಲಿದ ಬೆನ್ನಲ್ಲೇ ಅವರು ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಪ್ರಕಾಶ್ ಪಡುಕೋಣೆ ಪತ್ನಿ, ಇನ್ನೊಬ್ಬ ಪುತ್ರಿಗೂ ಸೋಂಕು ದೃಢಪಟ್ಟಿದೆ.>   ಇದೀಗ ದೀಪಿಕಾಗೂ ಸೋಂಕು ತಗುಲಿರುವುದು ಖಚಿತವಾಗಿದೆ. ದೀಪಿಕಾ ಕೂಡಾ ಈಗ ತಮ್ಮ ಕುಟುಂಬದವರ ಜೊತೆಗೆ ಬೆಂಗಳೂರಿನಲ್ಲಿದ್ದಾರೆ ಎಂದು ತಿಳಿದುಬಂದಿದೆ. ಇದೀಗ ರಣವೀರ್ ಸಿಂಗ್ ಕೂಡಾ ಸಂಕಷ್ಟದ ಸಮಯದಲ್ಲಿ ದೀಪಿಕಾ ಕುಟುಂಬದ ಜೊತಗಿರಲು ಬೆಂಗಳೂರಿಗೆ ಬಂದಿಳಿದಿದ್ದಾರೆ ಎಂಬ ಮಾಹಿತಿಯಿದೆ.ಇದರಲ್ಲಿ ಇನ್ನಷ್ಟು ಓದಿ :