ಮುಂಬೈ : ಬಾಲಿವುಡ್ ನಟಿ ರಾಣಿ ಮುಖರ್ಜಿ ಅವರಿಗೆ ಬುಧವಾರ(ಇಂದು) ಹುಟ್ಟುಹಬ್ಬದ ಸಂಭ್ರಮ. ಆದರೆ ತಮ್ಮ ಹುಟ್ಟುಹಬ್ಬವನ್ನು ಆಚರಿಸುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಇಂದು 40ನೇ ವಸಂತಕ್ಕೆ ಕಾಲಿಡುತ್ತಿದ್ದ ನಟಿ ರಾಣಿ ಮುಖರ್ಜಿ ಅವರು ತಮ್ಮ ಹುಟ್ಟು ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಳ್ಳಬೇಕೆಂದುಕೊಂಡಿದ್ದರಂತೆ. ಆದರೆ ಬಾಲಿವುಡ್ ನ ಖ್ಯಾತ ನಟಿ ಶ್ರೀದೇವಿ ಅವರು ಅಕಾಲಿಕ ಮರಣ ಹೊಂದಿದ್ದರಿಂದ ಇಡೀ ಬಾಲಿವುಡ್ ಚಿತ್ರರಂಗವೇ ದುಃಖದಲ್ಲಿ ಮುಳುಗಿದೆ. ಆದ ಕಾರಣ ತಮ್ಮ ಹುಟ್ಟುಹಬ್ಬವನ್ನು ಆಚರಣೆ