ಚೆನ್ನೈ : ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಕಾಲಾ ಚಿತ್ರದ ಬಿಡುಗಡೆ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಕನ್ನಡಿಗರ ಕೋಪಕ್ಕೆ ಕಾರಣರಾದ ಸ್ಟೈಲ್ ರಾಜಾ ಚಿತ್ರದ ನಾಯಕ ನಟ ಗಿರೀಶ್ ಇದೀಗ ತಮ್ಮ ಕೃತ್ಯಕ್ಕೆ ಕನ್ನಡಿಗರಲ್ಲಿ ಕ್ಷಮೆ ಯಾಚಿಸಿದ್ದಾರೆ. ನಟ ರಜನೀಕಾಂತ್ ಅವರು ಕಾವೇರಿ ವಿವಾದದಲ್ಲಿ ಕರ್ನಾಟಕದ ವಿರುದ್ಧ ಮಾತನಾಡಿದ್ದಕ್ಕೆ ಕೋಪಗೊಂಡ ಕನ್ನಡಿಗರು ಅವರ ಕಾಲಾ ಚಿತ್ರ ಕರ್ನಾಟಕದಲ್ಲಿ ಬಿಡುಗಡೆ ಮಾಡಬಾರದೆಂದು ತಡೆಯೊಡ್ಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾತನಾಡಿದ್ದ