ಮುಂಬೈ: ಕೊರೋನಾ ಸೋಂಕಿನಿಂದಾಗಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಆರೋಗ್ಯದ ಕುರಿತು ವೈದ್ಯರು ಲೇಟೆಸ್ಟ್ ಮಾಹಿತಿ ನೀಡಿದ್ದಾರೆ.ಲತಾ ಮಂಗೇಶ್ಕರ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿಯೇ ಮುಂದುವರಿದಿದೆ. ಅವರಿಗಾಗಿ ಪ್ರಾರ್ಥಿಸಿ ಎಂದು ವೈದ್ಯರು ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.ಇನ್ನು 92 ವರ್ಷ ವಯಸ್ಸಿನ ಲತಾ ಮಂಗೇಶ್ಕರ್ ಕಳೆದ ವಾರದಿಂದ ಐಸಿಯುವಿನಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ನಡುವೆ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಹಾಗಿದ್ದರೂ