ಲತಾ ಮಂಗೇಶ್ಕರ್ ಆರೋಗ್ಯದಲ್ಲಿ ಚೇತರಿಕೆ

ಮುಂಬೈ| Krishnaveni K| Last Modified ಶುಕ್ರವಾರ, 14 ಜನವರಿ 2022 (10:00 IST)
ಮುಂಬೈ: ಕೊರೋನಾ ಸೋಂಕಿತರಾಗಿ ಆಸ್ಪತ್ರೆಗೆ ದಾಖಲಾಗಿದ್ದ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಲತಾ ಶನಿವಾರ ದಾಖಲಾಗಿದ್ದರು. ಅವರಿಗೆ 92 ವರ್ಷ ವಯಸ್ಸಾಗಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.


ಇದೀಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿದೆ, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ. ಹಾಗಿದ್ದರೂ ಕೆಲವು ದಿನಗಳ ಕಾಲ ಐಸಿಯುವಿನಲ್ಲಿಯೇ ಅವರಿಗೆ ಚಿಕಿತ್ಸೆ ಮುಂದುವರಿಯಲಿದೆ.


ಇದರಲ್ಲಿ ಇನ್ನಷ್ಟು ಓದಿ :