ಹೈದರಾಬಾದ್ : ಟಾಲಿವುಡ್ ನ ನಟ, ರಾಜಕಾರಣಿ ಪವರ್ ಸ್ಟಾರ್ ಪವನ್ ಕಲ್ಯಾಣ ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಲಾಗಿತ್ತು ಎಂಬ ಭಯಾನಕ ವಿಚಾರವನ್ನು ಸ್ವತಃ ಪವನ್ ಅವರೇ ಬಹಿರಂಗಪಡಿಸಿದ್ದಾರೆ. ಗುರುವಾರ ಆಂಧ್ರ ಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ಎಲುರು ಹಳೆಯ ಬಸ್ ನಿಲ್ದಾಣದ ಬಳಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು ಈ ವಿಚಾರವನ್ನು ತಿಳಿಸಿದ್ದಾರೆ. ನನ್ನನ್ನು ಹತ್ಯೆ ಮಾಡಲು ಮೂರು ಜನ ನಡೆಸಿದ ಸಂಭಾಷಣೆಯ ಆಡಿಯೋ ತುಣುಕು ನಂಗೆ