ಕನ್ನಡಿಗರಲ್ಲಿ ಕನ್ನಡದಲ್ಲಿ ಮನವಿ ಮಾಡಿದ ನಟ ರಜನಿಕಾಂತ್

ಚೆನ್ನೈ| pavithra| Last Modified ಗುರುವಾರ, 7 ಜೂನ್ 2018 (14:24 IST)
ಚೆನ್ನೈ : ಕಾಲಾ ಚಿತ್ರದ ಪ್ರದರ್ಶನಕ್ಕೆ ಕನ್ನಡ ಸಂಘಟನೆಗಳು ಅಡ್ಡಿಪಡಿಸುತ್ತಿರುವ ಹಿನ್ನೆಲೆಯಲ್ಲಿ ನಟ ರಜನಿಕಾಂತ್ ಅವರು ಕನ್ನಡಿಗರಲ್ಲಿ ಕನ್ನಡ ಭಾಷೆಯಲ್ಲಿ ಮನವಿಯೊಂದನ್ನು ಮಾಡಿದ್ದಾರೆ.


ಕಾವೇರಿ ನೀರು ಹಂಚಿಕೆ ವಿಷಯದಲ್ಲಿ ರಜನಿಕಾಂತ್ ಅವರು ಕನ್ನಡಿಗರ ವಿರುದ್ಧ ಮಾತನಾಡಿದ್ದಕ್ಕೆ ಕರ್ನಾಟಕದಲ್ಲಿ ಅವರ ಅಭಿನಯದ ಕಾಲಾ ಚಿತ್ರದ ಬಿಡುಗಡೆಗೆ ಅಡ್ಡಿ ಪಡಿಸುವುದಾಗಿ ಕನ್ನಡಪರ ಸಂಘಟನೆಗಳು ತಿಳಿಸಿವೆ. ಆದಕಾರಣ ಈ ಬಗ್ಗೆ ಮಾತನಾಡಿದ ರಜನಿಕಾಂತ್ ಅವರು, ನಾನೇನು ತಪ್ಪು ಮಾಡಿಲ್ಲ. ನನ್ನ ಸಿನಿಮಾ ನೋಡಲು ಬಯಸುವವರಿಗೆ ಅಡ್ಡಿ ಮಾಡಬೇಡಿ. ಯಾವುದೇ ತೊಂದರೆ ಕೊಡಬೇಡಿ ಎಂದು ರಾಜ್ಯದ ಜನರು ಹಾಗೂ ಚಲನಚಿತ್ರ ವಾಣಿಜ್ಯ ಮಂಡಳಿಗೆ ಮನವಿ ಮಾಡಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್


ಇದರಲ್ಲಿ ಇನ್ನಷ್ಟು ಓದಿ :