ಸಲ್ಮಾನ್ ಖಾನ್ ಎದುರಿಸುತ್ತಿರುವ ಅಕ್ರಮ ಶಸ್ತ್ರಾಸ್ತ್ರ ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನದ ಜೋಧ್ಪುರ ನ್ಯಾಯಾಲಯ ಇಂದು ಅಂತಿಮ ತೀರ್ಪು ಪ್ರಕಟಿಸಲಿದ್ದು ಬಾಲಿವುಡ್ ಚಿತ್ತ ನ್ಯಾಯಾಲಯದತ್ತ ನೆಟ್ಟಿದೆ. 1998ರಲ್ಲಿ ಹಮ್ ಸಾಥ್ ಸಾಥ್ ಹೈ ಸಿನಿಮಾ ಶೂಟಿಂಗ್ ನಡೆಯುವಾಗ ಸಲ್ಮಾನ್ ಜೋಧ್ಪುರದ ಬಳಿ ಇರುವ ರಕ್ಷಿತಾರಣ್ಯದಲ್ಲಿ ಕೃಷ್ಣಮೃಗವನ್ನು ಬೇಟೆಯಾಡಿದ್ದರು. ಅವರ ವಿರುದ್ಧ ಕೃಷ್ಣಮೃಗ ಬೇಟೆ, ಪರವಾನಿಗೆ ಮುಗಿದ ಬಳಿಕವೂ ಶಸ್ತ್ರಾಸ್ತ್ರ ಹೊಂದಿರುವ ಆರೋಪ ಸೇರಿದಂತೆ ಮೂರು ಪ್ರಕರಣ ದಾಖಲಾಗಿತ್ತು .