ಜೋಧಪುರ : ಕೃಷ್ಣ ಮೃಗ ಭೇಟೆಯಾಡಿದ ಪ್ರಕರಣದಡಿ ಅಪರಾಧಿ ಎಂದು ಸಾಬೀತಾದ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ಇದೀಗ ಸೆರೆಮನೆವಾಸ ಅನುಭವಿಸುತ್ತಿದ್ದಾರೆ. ಕೃಷ್ಣ ಮೃಗ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೋಧಪುರ್ ನ್ಯಾಯಾಲಯ ಗುರುವಾರ ತೀರ್ಪು ಪ್ರಕಟಿಸಿದ್ದು, ಅದರ ಪ್ರಕಾರ ಸಲ್ಮಾನ್ ಖಾನ್ ಅವರು ದೋಷಿ ಎಂದು ಅವರಿಗೆ 5 ವರ್ಷ ಜೈಲು ವಾಸ ಹಾಗೂ 10000 ರೂ. ದಂಡ ವಿಧಿಸಿ, ಈ ಪ್ರಕರಣಕ್ಕೆ ಸಂಬಂಧಿಸಿದ ಉಳಿದ ಆರೋಪಿಗಳನ್ನು ಖುಲಾಸೆಗೊಳಿಸಿತ್ತು.