ಮುಂಬೈ: ಬಾಲಿವುಡ್ ಬಾದ್ ಶಹಾ ಎಂದೇ ಕರೆಯಿಸಿಕೊಳ್ಳುವ ಸೂಪರ್ ಸ್ಟಾರ್ ಶಾರುಖ್ ಖಾನ್ ಗೆ ಇಂದು ಜನ್ಮದಿನದ ಸಂಭ್ರಮ.ಶಾರುಖ್ ಇಂದು 58 ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಹುಟ್ಟುಹಬ್ಬದ ನಿಮಿತ್ತ ಮಧ್ಯರಾತ್ರಿಯಿಂದಲೇ ಅವರ ಮನೆ ಮುಂದೆ ಅಭಿಮಾನಿಗಳ ದಂಡೇ ನೆರೆದಿತ್ತು. ಮನೆ ಮುಂದೆ ಬಂದ ಅಭಿಮಾನಿಗಳಿಗೆ ಶಾರುಖ್ ಮನೆಯ ಬಾಲ್ಕನಿಯಲ್ಲಿ ಎಂದಿನಂತೆ ನಿಂತು ಕೈ ಮುಗಿದು ಧನ್ಯವಾದ ಸಲ್ಲಿಸಿದ್ದಾರೆ.ಇತ್ತೀಚೆಗಷ್ಟೇ ಜವಾನ್ ಸಿನಿಮಾ ಸಕ್ಸಸ್ ಖುಷಿಯಲ್ಲಿರುವ ಶಾರುಖ್ ಭಾರತದ ಶ್ರೀಮಂತ ನಟರಲ್ಲಿ ಒಬ್ಬರು.