ಮಾನನಷ್ಟ ಮೊಕದ್ದಮೆ ಹೂಡಿದ ಶಿಲ್ಪಾ ಶೆಟ್ಟಿ

ಮುಂಬೈ| Krishnaveni K| Last Modified ಶುಕ್ರವಾರ, 30 ಜುಲೈ 2021 (09:36 IST)
ಮುಂಬೈ: ಪತಿ, ಉದ್ಯಮಿ ರಾಜ್ ಕುಂದ್ರಾ ಪೋರ್ನ್ ವಿಡಿಯೋ ಪ್ರಕರಣದಲ್ಲಿ ಬಂಧಿತರಾದ ಬಳಿಕ ನಟಿ ಶಿಲ್ಪಾ ಶೆಟ್ಟಿಯೂ ಸಾಕಷ್ಟು ಟ್ರೋಲ್ ಗೊಳಗಾಗಿದ್ದರು. ಈ ಬಗ್ಗೆ ಇದೀಗ ಶಿಲ್ಪಾ ನ್ಯಾಯಾಲಯದ ಮೊರೆ ಹೋಗಿದ್ದಾರೆ.
 

ಶಿಲ್ಪಾ ತಮ್ಮ ಬಗ್ಗೆ ಆಕ್ಷೇಪಾರ್ಹ ಸುದ್ದಿ, ಪೋಸ್ಟ್ ಪ್ರಕಟಿಸಿದ ವೆಬ್ ತಾಣಗಳು, ಸಾಮಾಜಿಕ ಜಾಲತಾಣಗಳ ವಿರುದ್ಧ ಬಾಂಬೇ ಹೈಕೋರ್ಟ್ ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ ಎನ್ನಲಾಗಿದೆ.
 
ತಮ್ಮ ಪತಿಯ ತಪ್ಪಿಗೆ ಓದುಗರ ಸಂಖ್ಯೆ ಹೆಚ್ಚಿಸಲು ಕೆಲವರು ತಮ್ಮ ವಿರುದ್ಧ ಮಾನಹಾನಿಕರ ಲೇಖನ ಪ್ರಕಟಿಸಲಾಗುತ್ತಿದೆ. ಇದರಿಂದ ತಮ್ಮ ಗೌರವಕ್ಕೆ ಚ್ಯುತಿ ಬರುತ್ತಿದೆ ಎಂದು ಶಿಲ್ಪಾ ದೂರಿದ್ದಾರೆ ಎನ್ನಲಾಗಿದೆ.
ಇದರಲ್ಲಿ ಇನ್ನಷ್ಟು ಓದಿ :