ದುಬೈ: ಬಾಲಿವುಡ್ ಖ್ಯಾತ ನಟಿ ಶ್ರೀದೇವಿ ಸಾವಿಗೆ ಹೊಸ ಟ್ವಿಸ್ಟ್ ಸಿಕ್ಕಿದೆ. ಸಂಬಂಧಿಕರ ಮದುವೆಗೆ ದುಬೈಗೆ ಹೋಗಿದ್ದಾಗ ಹೋಟೆಲ್ ಕೊಠಡಿಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ ಶ್ರೀದೇವಿ ಸಾವಿಗೆ ನೈಜ ಕಾರಣ ಬಹಿರಂಗವಾಗಿದೆ. ದುಬೈನ ಆಸ್ಪತ್ರೆಯಲ್ಲಿ ಶ್ರೀದೇವಿ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಅದರ ವರದಿಗಳು ಇದೀಗ ಬಹಿರಂಗವಾಗಿದೆ. ಇದರ ಪ್ರಕಾರ ಶ್ರೀದೇವಿ ಸಾವಿಗೆ ಬಾತ್ ಟಬ್ ನಲ್ಲಿ ಆಕಸ್ಮಿಕವಾಗಿ ಬಿದ್ದಿರುವುದು ಕಾರಣ ಎಂದು ಉಲ್ಲೇಖಿಸಲಾಗಿದೆ. ಅಷ್ಟೇ ಅಲ್ಲದೆ, ಅವರ ರಕ್ತದ