ಹೊಸ ವರ್ಷಾಚರಣೆಗೆ ನಗರದಲ್ಲಿ ನಡೆಯುವ ಬಾಲಿವುಡ್ ನಟಿ ಸನ್ನಿ ಲಿಯೋನ್ ನೈಟ್ ಕಾರ್ಯಕ್ರಮಕ್ಕೆ ಅನುಮತಿ ನೀಡುವುದಿಲ್ಲ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಂತಹ ಕಾರ್ಯಕ್ರಮಗಳಿಗೆ ಅವಕಾಶ ನೀಡದಂತೆ ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಲಾಗಿದೆ ಎಂದಿದ್ದಾರೆ. ನಟಿ ಸನ್ನಿ ಲಿಯೋನ್ ಕಾರ್ಯಕ್ರಮಕ್ಕೆ ಹಲವರ ವಿರೋಧ ವ್ಯಕ್ತವಾಗಿರುವ ಕಾರಣ ಅನುಮತಿ ನೀಡಿದ್ದರೆ ಅದನ್ನು ರದ್ದು ಮಾಡಲು ಸೂಚನೆ ನೀಡಲಾಗುವುದು. ನಮ್ಮ ಸಂಪ್ರದಾಯಕ್ಕೆ ವಿರುದ್ಧವಾದ