ಮುಂಬೈ: ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಅವರಿಗೆ 98 ವರ್ಷ ವಯಸ್ಸಾಗಿತ್ತು.ಟ್ರಾಜಿಡಿ ಕಿಂಗ್ ಎಂದೇ ಕರೆಯಿಸಿಕೊಳ್ಳುತ್ತಿದ್ದ ದಿಲೀಪ್ ಕುಮಾರ್ ಇಂದು ಬೆಳಿಗ್ಗೆ 7.30 ಕ್ಕೆ ವಯೋಸಹಜ ಖಾಯಿಲೆಯಿಂದ ಮೃತಪಟ್ಟಿದ್ದಾರೆ. ಪತ್ನಿ ಹಾಗೂ ಪುತ್ರಿ, ನಟಿ ಸಾಯಿರಾ ಬಾನು ಹಾಗೂ ಅಪಾರ ಅಭಿಮಾನಿಗಳನ್ನು ಅವರು ಅಗಲಿದ್ದಾರೆ. ಉಸಿರಾಟದ ತೊಂದರೆ ಹಿನ್ನಲೆಯಲ್ಲಿ ಅವರನ್ನು ಹಿಂದೂಜಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಯೂಸುಫ್ ಖಾನ್ ಎಂಬುದು ಅವರ ಮೂಲ ಹೆಸರಾಗಿತ್ತು. ಸಿನಿರಂಗಕ್ಕೆ ಕಾಲಿಟ್ಟ