ಚೆನ್ನೈ : ತಮಿಳಿನ ಖ್ಯಾತ ನಟ ವಿಜಯ್ ಅಭಿನಯದ ಸರ್ಕಾರ್ ಚಿತ್ರಕ್ಕೆ ಎಐಎಡಿಎಂಕೆ ಪಕ್ಷದವರು ವಿರೋಧ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಇದೀಗ ವಿಜಯ್ ಅಭಿಮಾನಿಗಳು ರಾಜಕೀಯ ಪಕ್ಷದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಜಯ್ ನಟಿಸಿದ ಸರ್ಕಾರ್ ಸಿನಿಮಾ ದೀಪಾವಳಿ ಹಬ್ಬದಂದು ಜಗತ್ತಿನಾದ್ಯಂತ ಬಿಡುಗಡೆಗೊಂಡಿದ್ದು ಉತ್ತಮ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಸಿನಿಮಾದ ಕೆಲ ದೃಶ್ಯಗಳಲ್ಲಿ ಟಿವಿ, ಲ್ಯಾಪ್ಟಾಪ್ ಹಾಗೂ ಮಿಕ್ಸಿಗಳನ್ನು ಬೆಂಕಿಗೆ ಹಾಕುವ ದೃಶ್ಯವಿದ್ದು, ಇದಕ್ಕೆ ಎಐಎಡಿಎಂಕೆ ಪಕ್ಷದ ನಾಯಕರು ಹಾಗೂ