ಸಿಎಂ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ದಾಖಲೆಯ 13 ನೇ ಬಜೆಟ್ ಮಂಡಿಸುತ್ತಿದ್ದು, ಐದು ವರ್ಷಗಳ ಸರಕಾರ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ನಾನು ಅರ್ಥಶಾಸ್ತ್ರವನ್ನು ಶಾಸ್ತ್ರಿಯವಾಗಿ ಅಧ್ಯಯನ ಮಾಡಿಲ್ಲ. ಆದರೆ, ನಾನು ರೈತ ಕುಟುಂಬದಲ್ಲಿ ಹುಟ್ಟಿದ್ದರಿಂದ ಕಷ್ಟ ಸುಖಗಳ ಅರಿವಿದೆ. ಕರ್ನಾಟಕದಲ್ಲಿ ಉದ್ಯೋಗ ಸಹಿತ ಅಭಿವೃದ್ಧಿಯಾಗುತ್ತಿದೆ. ನಮ್ಮದು ರೈತ ಸ್ನೇಹಿ ಸರಕಾರವಾಗಿದೆ ಎಂದರು.ಕೃಷಿ ಹೈನುಗಾರಿಕೆಯಲ್ಲಿ ಮುಂದಿದ್ದೇವೆ. ಬಂಡವಾಳ ಆಕರ್ಷಣೆಯಲ್ಲಿ ಮುಂದಿದೆ. ಶಿಕ್ಷಣ, ಆರೋಗ್ಯ, ಸಮಾಜ ಕಲ್ಯಾಣ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ