ಧರ್ಮಸ್ಥಳ: ರಾಜ್ಯ ಸರಕಾರದ ನೂತನ ಬಜೆಟ್ನಲ್ಲಿ ಸಿದ್ದರಾಮಯ್ಯನವರ ನೇತೃತ್ವದ ಈ ಹಿಂದಿನ ಕಾಂಗ್ರೆಸ್ ಕಾರ್ಯಕ್ರಮಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಹೇಳಿದ್ದಾರೆ. ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಮಾತನಾಡಿದ ಅವರು, ಹೊಸ ಸರಕಾರ ಬಂದಾಗ ಇನ್ನಷ್ಟು ಹೆಚ್ಚಿನ ಕಾರ್ಯಕ್ರಮಗಳನ್ನು ಜನರಿಗೆ ನೀಡುತ್ತದೆ. ಅದರಲ್ಲಿ ವಿಶೇಷತೆಯೇನಿಲ್ಲ. ಹೀಗಾಗಿ ಈ ಹಿಂದಿನ ಬಜೆಟ್ ಕಾರ್ಯಕ್ರಮಗಳನ್ನು ಮುಂದುವರೆಸುವ ಬಗ್ಗೆ ತೀರ್ಮಾನಿಸಿದ್ದೇವೆ ಎಂದರು.