ಬೆಂಗಳೂರು (ಆ.17): ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್ ತಿಂಗಳಲ್ಲಿ ಕೊರೋನಾ ಮೂರನೇ ಅಲೆ ಎದುರಾಗುವ ಸಾಧ್ಯತೆ ದಟ್ಟವಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಜಿಲ್ಲಾ ಮಟ್ಟದಲ್ಲೇ ಕೊರೋನಾ ನಿಯಂತ್ರಣಕ್ಕಾಗಿ ‘ಜಿಲ್ಲಾ ತಾಂತ್ರಿಕ ತಜ್ಞರ ಸಮಿತಿ’ (ಟಿಇಸಿ) ರಚನೆ ಮಾಡಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.