ರಾಜ್ಯದಲ್ಲಿ ಮತ್ತೊಂದು ಕೊರೊನಾ ಸೋಂಕು ಪತ್ತೆ; ರಾಜ್ಯದ ಜನತೆಗೆ ಆರೋಗ್ಯ ಸಚಿವರು ಹೇಳಿದ್ದೇನು?

ಬೆಂಗಳೂರು| pavithra| Last Updated: ಸೋಮವಾರ, 23 ಮಾರ್ಚ್ 2020 (11:19 IST)
ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಕೊರೊನಾ ಸೋಂಕು ಪತ್ತೆಯಾದ ಹಿನ್ನಲೆಯಲ್ಲಿ ಲಾಕ್ ಡೌನ್ ಗಂಭೀರವಾಗಿ ಪರಿಗಣಿಸಿ ಎಂದು  ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.


ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 27ಕ್ಕೆ ಏರಿಕೆಯಾಗಿದೆ. ಕೊರೊನಾ ಸೋಂಕು ಸಂಬಂಧ 1000 ವೆಂಟಿಲೇಟರ್, 5 ಲಕ್ಷ ಪಿಪಿಇ ಕಿಟ್ ಖರೀದಿ ಮಾಡಲು ನಿರ್ಧರಿಸಿದ್ದೇವೆ. 15 ಲಕ್ಷ ಮಾಸ್ಕ್ ಗಳನ್ನು ಖರೀದಿಸುತ್ತೇವೆ. ಲಾಕ್ ಡೌನ್ ಗಂಭೀರವಾಗಿ ಪರಿಗಣಿಸಿದ್ದೇವೆ. ಕೊರೊನಾ ಸೋಂಕಿತ ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡುತ್ತೇನೆ. ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.

ಇದರಲ್ಲಿ ಇನ್ನಷ್ಟು ಓದಿ :