ನವದೆಹಲಿ : ಭಾರತದಲ್ಲಿ ಕೋರೊನಾ ವೈರಸ್ ನಿಯಂತ್ರಿಸಲು ಪ್ರಧಾನಿ ಮೋದಿ ಸರ್ಕಾರ ಶ್ರಮಿಸುತ್ತಿರುವುದನ್ನು ಕಂಡು ಜಗತ್ತಿನ ಶ್ರೀಮಂತ ಉದ್ಯಮಿ, ಮೈಕ್ರೋಸಾಫ್ಟ್ ಸಹ ಸ್ಥಾಪಕ ಬಿಲ್ ಗೇಟ್ಸ್ ಪತ್ರದ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮಹಾಮಾರಿ ಕೊರೊನಾ ವೈರಸ್ ನಿಂದ ದೇಶದ ಜನರನ್ನು ಪಾರು ಮಾಡಲು ಪ್ರಧಾನಿ ಮೋದಿ ಇಡೀ ಭಾರತವನ್ನೇ ಲಾಕ್ ಡೌನ್ ಮಾಡಿರುವುದು ಸ್ವಾಗತಾರ್ಹ. ಇದರಿಂದ ಸೋಂಕಿತರ ಪತ್ತೆ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ಬಿಲ್ ಗೇಟ್ಸ್ ಪತ್ರದ ಮೂಲಕ ತಿಳಿಸಿದ್ದಾರೆ.