ಬಿಎಂಟಿಸಿ, ಕೆಎಸ್ ಆರ್ ಟಿಸಿ ಬಸ್ ಸಂಚಾರ ಆರಂಭ

ಬೆಂಗಳೂರು| Krishnaveni K| Last Modified ಮಂಗಳವಾರ, 19 ಮೇ 2020 (09:03 IST)
ಬೆಂಗಳೂರು: ರಾಜ್ಯ ಸರ್ಕಾರ ನಿನ್ನೆ ಘೋಷಿಸಿದಂತೆ ಇಂದಿನಿಂದ ರಾಜ್ಯದಲ್ಲಿ ಕೆಎಸ್ ಆರ್ ಟಿಸಿ, ಬಿಎಂಟಿಸಿ ಸೇರಿದಂತೆ ಬಸ್ ಸಂಚಾರ ಆರಂಭವಾಗಿದೆ.
 

ಬೆಳ್ಳಂ ಬೆಳಿಗ್ಗೆಯೇ ಜನರು ತಮ್ಮ ಊರಿಗೆ ತೆರಳಲು ಬಸ್ ಗಾಗಿ ಮೆಜೆಸ್ಟಿಕ್ ನಲ್ಲಿ ಸಾಲುಗಟ್ಟಿ ನಿಂತಿದ್ದಾರೆ. ಇನ್ನು ಬಸ್ ನಲ್ಲಿ ಕೇವಲ 30 ಜನರಿಗೆ ಮಾತ್ರ ಅವಕಾಶವಿದ್ದು, ಎರಡು ಸವಾರರು ಕೂರುವ ಸೀಟ್ ನಲ್ಲಿ ಒಬ್ಬರಿಗೆ, ಮೂರು ಸೀಟ್ ನಲ್ಲಿ ಇಬ್ಬರಿಗೆ ಮಾತ್ರ ಪ್ರಯಾಣಿಸಲು ಅವಕಾಶವಿದೆ.
 
ಬಸ್ ಹತ್ತುವ ಮೊದಲು ಪ್ರಯಾಣಿಕರ ಥರ್ಮಲ್ ಸ್ಕ್ರೀನಿಂಗ್ ನಡೆಸಿ ಬಸ್ ನೊಳಗೆ ಬಿಡಲಾಗುತ್ತಿದೆ. ಎಲ್ಲರೂ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ.
ಇದರಲ್ಲಿ ಇನ್ನಷ್ಟು ಓದಿ :