ಮೈಸೂರು : ಮನುಕುಲಕ್ಕೆ ಬಂದ ದೊಡ್ಡ ಗಂಡಾತರವಾದ ಕೊರಾನಾದಿಂದ ಎಲ್ಲರನ್ನೂ ಚಾಮುಂಡೇಶ್ವರಿ ಪಾರು ಮಾಡಲಿ ಎಂದು ಬಿಜೆಪಿ ನಾಯಕ ಎಸ್.ಎಂ.ಕೃಷ್ಣ ಕೋರಿದರು. ಚಾಮುಂಡಿಬೆಟ್ಟದಲ್ಲಿ ದಸರಾ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕಷ್ಟಕರವಾದ ಕಾಲದಲ್ಲಿ ಆರಂಭವಾದ ಉತ್ಸವ ಸುಲಲಿತವಾಗಿ ನಡೆಯಲಿ. ದೇವಿಯ ಅಗ್ರಪೂಜೆಯೊಂದಿಗೆ ಆರಂಭವಾದ ದಸರಾ ಎಲ್ಲರಿಗೂ ಒಳಿತು ಮಾಡಲಿ ಎಂದರು. ಯಾವ ಜನ್ಮದ ಪುಣ್ಯವೋ ಏನೋ, ನಮ್ಮ ಜನಪ್ರಿಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ತಂದೆಯೊಂದಿಗೆ ಕೆಲಸ ಮಾಡುವ ಅವಕಾಶ