ಕೊರೋನಾ ಸೋಂಕಿತರ ಚೇತರಿಕೆ ಪ್ರಮಾಣದಲ್ಲಿ ಏರಿಕೆ

Coronacorona virus" width="400" />
ನವದೆಹಲಿ| Krishnaveni K| Last Modified ಭಾನುವಾರ, 12 ಜುಲೈ 2020 (09:26 IST)
ನವದೆಹಲಿ: ದೇಶದಲ್ಲಿ ಕೊರೋನಾ ಪ್ರಕರಣ ದಿನೇ ದಿನೇ ಏರಿಕೆಯಾಗುತ್ತಿರುವ ಸುದ್ದಿಯ ನಡುವೆಯೂ ಸಮಾಧಾನಕರ ವಿಚಾರವೊಂದು ಬಂದಿದೆ.

 
ಕೊರೋನಾಗೆ ಇದುವರೆಗೆ 5 ಲಕ್ಷಕ್ಕೂ ಅಧಿಕ ಮಂದಿಗೆ ತುತ್ತಾಗಿದ್ದಾರೆ. ಈ ಗಾಗಲೇ 2 ಲಕ್ಷಕ್ಕೂ ಅಧಿಕ ಮಂದಿ ಗುಣಮುಖರಾಗಿದ್ದಾರೆ. ಇದರೊಂದಿಗೆ ಚೇತರಿಕೆಯ ಪ್ರಮಾಣ ಶೇ. 62.78 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಸಚಿವಾಲಯ ಹೇಳಿದೆ. ಇದು ಕಳೆದ ತಿಂಗಳಿಗೆ ಹೋಲಿಸಿದರೆ ಕೊಂಚ ಸಮಾಧಾನಕರ ವಿಚಾರವಾಗಿದೆ.
 
ಇತ್ತೀಚೆಗೆ ಹೆಚ್ಚು ಸಂಖ್ಯೆಯಲ್ಲಿ ಪರೀಕ್ಷೆ ನಡೆಯುತ್ತಿರುವುದು, ಸುಧಾರಿತ ವೈದ್ಯಕೀಯ ಸೌಲಭ್ಯಗಳಿಂದಾಗಿ ನಮಗೆ ಇದು ಸಾಧ‍್ಯವಾಗಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.
ಇದರಲ್ಲಿ ಇನ್ನಷ್ಟು ಓದಿ :