ರಾಜ್ಯ ಸರ್ಕಾರವು ಕೊರೋನಾ ಹರಡುವಿಕೆ ತಡೆಯಲು ಹಾಗೂ ಅದರ ನಿಯಂತ್ರಣಕ್ಕೆ ಹಲವಾರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಕೊರೋನಾ ವೈರಸ್ ಬಗ್ಗೆ ಹರಡುವ ವದಂತಿಗಳು ಹಾಗೂ ಅಪಪ್ರಚಾರಗಳನ್ನು ತಡೆದು ಜನರಿಗೆ ನೈಜ ಮಾಹಿತಿ ಒದಗಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಭಾರತೀಯ ರೆಡ್ ಕ್ರಾಸ್ ಸೊಸೈಟಿ ಹಾಗೂ ಕರ್ನಾಟಕ ರಾಜ್ಯ ಕಾರ್ಮಿಕ ಅಧ್ಯಯನ ಸಂಸ್ಥೆ ಸಹಯೋಗದಲ್ಲಿ ಪ್ರಾರಂಭಿಸಿರುವ ಕಾರ್ಯಕ್ರಮಕ್ಕೆ ಸ್ವಯಂ ಸೇವಕರನ್ನು ಆಹ್ವಾನಿಸಿದೆ. ಸರ್ಕಾರದೊಂದಿಗೆ ಕೈಜೋಡಿಸಿ ಕೊರೋನಾ ವಿರುದ್ಧ ಹೋರಾಡಲು