ನವದೆಹಲಿ : ಲಾಕ್ ಡೌನ್ ನಿಂದಾಗಿ ಕೆಲಸ ಕಳೆದುಕೊಂಡು ಹಸಿವಿನಿಂದ ಬಳಲುತ್ತಿರುವ ಬಡವರ ಆತ್ಮಗೌರವವನ್ನು ಕಾಪಾಡುವಲ್ಲಿ ಸರ್ಕಾರ ಎಡವಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಪಿ.ಚಿದಂಬರಂ ಆರೋಪಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ತುಂಬಾ ಜನರ ಬಳಿ ಹಣ ಇಲ್ಲದಂತಾಗಿದೆ. ಅನೇಕರು ಉಚಿತವಾಗಿ ಹಂಚುತ್ತಿರುವ ಊಟಕ್ಕಾಗಿ ಸಾಲು ಗಟ್ಟಿ ನಿಲ್ಲುತ್ತಿದ್ದಾರೆ. ಇಂತವರಿಗೆ ಸರ್ಕಾರ ಹಣ ಹಾಗೂ ಉಚಿತ ಆಹಾರ ನೀಡಬೇಕು. ಕೇವಲ ಹೃದಯವಿಲ್ಲದ ಸರ್ಕಾರ ಮಾತ್ರ ಏನು ಮಾಡದಿರಲು