ಮಂಗಳೂರು: ಕೇರಳದ ಗಡಿ ಜಿಲ್ಲೆ ಕಾಸರಗೋಡಿನಲ್ಲಿ ಅತೀ ಹೆಚ್ಚು ಕೊರೋನಾವೈರಸ್ ಪ್ರಕರಣಗಳು ಪತ್ತೆಯಾಗುತ್ತಿರುವುದರಿಂದ ಕರ್ನಾಟಕದಿಂದ ಕೇರಳಕ್ಕೆ ಸಂಚಾರ ಬಂದ್ ಮಾಡಿ ದ.ಕ. ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.ಕಾಸರಗೋಡಿನಲ್ಲಿ ಇದುವರೆಗೆ 6 ಕೊರೋನಾ ಪ್ರಕರಣಗಳು ವರದಿಯಾಗಿವೆ. ಹೀಗಾಗಿ ಕರ್ನಾಟಕದಿಂದ ಕೇರಳಕ್ಕೆ ಸಂಪರ್ಕಿಸುವ ಗಡಿ ಭಾಗದಲ್ಲಿ ತಪಾಸಣೆ ನಡೆಸಲಾಗುತ್ತಿತ್ತು. ಇದೀಗ ಉಭಯ ರಾಜ್ಯಗಳ ನಡುವಿನ ಬಸ್ ಹಾಗೂ ಇತರ ಸಂಚಾರ ವ್ಯವಸ್ಥೆಯನ್ನೂ ಬಂದ್ ಮಾಡಲಾಗಿದೆ.ಕಾಸರಗೋಡಿನಲ್ಲಿ ನಾಳೆಯಿಂದ ಒಂದು ವಾರ ಕಾಲ ಸಂಪೂರ್ಣ ಬಂದ್ ಮಾಡಲಾಗಿದ್ದು,