ಬೆಂಗಳೂರು: ಮಕ್ಕಳಲ್ಲಿ ಕೋವ್ಯಾಕ್ಸಿನ್ ಕೋವಿಡ್ ಲಸಿಕೆಯ ತುರ್ತು ಬಳಕೆಗೆ ಭಾರತೀಯ ಔಷಧ ನಿಯಂತ್ರಣ ಮಹಾ ನಿರ್ದೇಶನಾಲಯ (ಡಿಸಿಜಿಐ) ಮತ್ತು ಕೇಂದ್ರ ಸರ್ಕಾರ ಶೀಘ್ರವೇ ಅನುಮೋದನೆ ನೀಡಲಿವೆ ಎಂದು ಮೂಲಗಳು ಹೇಳಿವೆ. ಕ್ಲಿನಿಕಲ್ ಪ್ರಯೋಗದ ಅವಧಿ ಪೂರ್ಣಗೊಳ್ಳುವುದಕ್ಕೂ ಮೊದಲೇ ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆ ನೀಡಲು ಅನುಮೋದನೆ ದೊರೆಯುವ ಸಾಧ್ಯತೆ ಇದೆ ಎಂದು ಮೂಲಗಳನ್ನು ಉಲ್ಲೇಖಿಸಿ ಐಎಎಎನ್ಎಸ್ ವರದಿ ಮಾಡಿದೆ. ಲಸಿಕೆಯ ಎರಡು ಡೋಸ್ ಪಡೆದ ಮಕ್ಕಳಲ್ಲಿ ಸೃಷ್ಟಿಯಾಗಿರುವ ಪ್ರತಿಕಾಯಗಳ ಪರಿಣಾಮಕಾರಿತ್ವದ ಬಗ್ಗೆ