ಬೆಂಗಳೂರು, ಸೆ 21 : ಕಳೆದ ಎರಡು ದಿನಗಳಿಂದ ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಮುಖಗೊಂಡಿದ್ದು, ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಬರುವ ಸೂಚನೆ ದೊರೆತಿದೆ. ರಾಜ್ಯದಲ್ಲಿ ಹೊಸ ಸೋಂಕಿತ ಪ್ರಕರಣಗಳ ಪ್ರಮಾಣ ಶೇ.0.60ರಷ್ಟಿದ್ದು, ಆದರೆ ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 3.54ರಷ್ಟಿದೆ. ಭಾನುವಾರಕ್ಕಿಂತ ಹೆಚ್ಚನ ಸಾವುಗಳು ಸಂಭವಿಸಿವೆ. ಕರ್ನಾಟಕ ರಾಜ್ಯದಲ್ಲಿ ಇಂದು (ಸೆ.20) ಹೊಸದಾಗಿ 677 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ