ನವದೆಹಲಿ: ನಮ್ಮ ದೇಶದ ಕೆಲವು ಕಡೆ ಕೊರೋನಾ ಪ್ರಕರಣಗಳು ಮತ್ತೆ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಲಾಕ್ ಡೌನ್ ಮಾಡಲಾಗುತ್ತಿದೆ. ಇದು ಹಲವರ ಅಸಮಾಧಾನಕ್ಕೆ ಗುರಿಯಾಗಿರಬಹುದು. ಆದರೆ ಈ ರೀತಿ ಮತ್ತೊಂದು ಸುತ್ತಿನ ಲಾಕ್ ಡೌನ್ ಈಗ ಕೆಲವು ವಿದೇಶಗಳಲ್ಲೂ ನಡೆಯುತ್ತಿದೆ. ಆಸ್ಟ್ರೇಲಿಯಾ, ಜಪಾನ್, ಹಾಂಕಾಂಗ್ ಮುಂತಾದ ದೇಶಗಳ ಕೆಲವೆಡೆ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಸಾರಿಗೆ, ಜನರ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಈ ದೇಶಗಳಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.