ಬೆಂಗಳೂರು: ಕೊರೋನಾವೈರಸ್ ಇನ್ನೂ ನಿಂತಿಲ್ಲ. ದಿನೇ ದಿನೇ ಹೆಚ್ಚುತ್ತಲೇ ಇದೆ. ಈ ನಡುವೆ ರಾಜ್ಯ ಸರ್ಕಾರ ಶಾಲೆ ಆರಂಭಿಸುವ ಬಗ್ಗೆ ಪ್ರಸ್ತಾಪವಿಟ್ಟಿರುವುದು ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ. ಒಂದರಿಂದ 10 ನೇ ತರಗತಿವರೆಗಿನ ಮಕ್ಕಳಿಗೆ ಎರಡು ಪಾಳಿಯಲ್ಲಿ ಜೂನ್ ಮಧ್ಯಭಾಗದಿಂದ ಶಾಲೆ ಆರಂಭಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ. ಈ ಬಗ್ಗೆ ಮಾಧ್ಯಮಗಳಲ್ಲೂ ವರದಿಯಾಗುತ್ತಿದೆ.ಈ ಬಗ್ಗೆ ಪೋಷಕರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊರೋನಾ ಇನ್ನೂ ವ್ಯಾಪಕವಾಗಿರುವಾಗ ಶಾಲೆ ಆರಂಭಿಸಲು ಇಷ್ಟು