ಶಸ್ತ್ರಚಿಕಿತ್ಸೆಗೊಳಗಾದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಗೂ ಕೊರೋನಾ

ನವದೆಹಲಿ| Krishnaveni K| Last Modified ಮಂಗಳವಾರ, 11 ಆಗಸ್ಟ್ 2020 (09:47 IST)
ನವದೆಹಲಿ: ಮೆದುಳಿನ ಶಸ್ತ್ರಚಿಕಿತ್ಸೆಗೊಳಗಾದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

 
ನವದೆಹಲಿಯ ಸೇನಾ ಆಸ್ಪತ್ರೆಗೆ ದಾಖಲಾಗಿರುವ ಪ್ರಣಬ್ ಸದ್ಯಕ್ಕೆ ಐಸಿಯುವಿನಲ್ಲಿದ್ದು, ವೆಂಟಿಲೇಟರ್ ಅಳವಡಿಸಲಾಗಿದೆ. ನಿನ್ನೆ ಅವರು ಶಸ್ತ್ರಚಿಕಿತ್ಸೆಗೊಳಗಾಗಿದ್ದರು.
 
ಪ್ರಣಬ್ ಮುಖರ್ಜಿ ದಾಖಲಾಗಿರುವ ಆಸ್ಪತ್ರೆಗೆ ಭೇಟಿ ನೀಡಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ವಿಚಾರಿಸಿದ್ದಾರೆ. ಸದ್ಯಕ್ಕೆ ಅವರ ಪರಿಸ್ಥಿತಿ ಗಂಭೀರವಾಗಿಯೇ ಇದೆ ಎನ್ನಲಾಗಿದೆ.
ಇದರಲ್ಲಿ ಇನ್ನಷ್ಟು ಓದಿ :