ನವದೆಹಲಿ: ಕೆಲ ದಿನಗಳಿಂದ ಭಾರತದಲ್ಲಿ ಇಳಿಕೆಯ ಹಾದಿಯಲ್ಲಿದ್ದ ಮಹಾಮಾರಿ ಕೊರೋನಾ ಸೋಂಕು ಮತ್ತೆ ಏರಿಕೆಯಾಗಲು ಆರಂಭವಾಗಿದ್ದು, ದೇಶದಲ್ಲಿ ಬುಧವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 41,965 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 460 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.