ಬೆಂಗಳೂರು: ಲಾಕ್ ಡೌನ್ 3 ಜಾರಿಯಲ್ಲಿರುವಾಗಲೇ ಮದ್ಯದಂಗಡಿ ತೆರೆಯುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಇನ್ನೂ ಕೊರೋನಾ ನಿಯಂತ್ರಣಕ್ಕೆ ಬಂದಿಲ್ಲ. ಅನಗತ್ಯವಾಗಿ ಹೊರಗಡೆ ಓಡಾಡುವಂತಿಲ್ಲ. ಅಂತಹ ಪರಿಸ್ಥಿತಿಯಲ್ಲಿ ಮದ್ಯದಂಗಡಿ ತೆರೆಯಲು ಇಷ್ಟು ಅವಸರ ಏಕೆ ಬೇಕಿತ್ತು ಎಂದು ಹಲವರು ಫೇಸ್ ಬುಕ್, ಟ್ವಿಟರ್, ಸೇರಿದಂತೆ ಹಲವು ಸಾಮಾಜಿಕ ಜಾಲತಾಣಗಳ ಮೂಲಕ ಪ್ರಶ್ನೆ ಮಾಡುತ್ತಿದ್ದಾರೆ.ಮದ್ಯ ಮಾರಾಟ ಮಾಡಲು ಸರ್ಕಾರ ನಿರ್ಧರಿಸಿದ ತಕ್ಷಣವೇ ಪಾನಪ್ರಿಯರು ಸಾಮಾಜಿಕ ಅಂತರವನ್ನೂ