ಕೊವಿಡ್ ವ್ಯಾಕ್ಸಿನ್ ಪಡೆದ ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ

ಮುಂಬೈ| Krishnaveni K| Last Updated: ಮಂಗಳವಾರ, 2 ಮಾರ್ಚ್ 2021 (13:21 IST)
ಮುಂಬೈ: ವಯೋವೃದ್ಧರಿಗೆ ಮತ್ತು 45 ಮೇಲ್ಪಟ್ಟ ಅನಾರೋಗ್ಯ ಪೀಡಿತರಿಗೆ ನೀಡಲಾಗುತ್ತಿರುವ ಎರಡನೇ ಹಂತದ ಲಸಿಕೆ ವಿತರಣೆ ಕಾರ್ಯಕ್ರಮದಡಿಯಲ್ಲಿ ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ಲಸಿಕೆ ಪಡೆದುಕೊಂಡಿದ್ದಾರೆ.

 

ಅಹಮ್ಮದಾಬಾದ್ ನಲ್ಲಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಪಾಲ್ಗೊಂಡಿರುವ ಟೀಂ ಇಂಡಿಯಾ ಕೋಚ್ ಲಸಿಕೆ ಪಡೆದುಕೊಂಡ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿಕೊಂಡಿದ್ದು, ಕೊರೋನಾ ವಿರುದ್ಧ ಹೋರಾಡಿ, ಭಾರತವನ್ನು ಸಶಕ್ತ ರಾಷ್ಟ್ರವನ್ನಾಗಿ ಮಾಡಲು ಶ್ರಮಿಸಿದ ವಿಜ್ಞಾನಿಗಳು, ವೈದ್ಯ ಸಿಬ್ಬಂದಿಗಳಿಗೆ ಧನ್ಯವಾದ ಸಲ್ಲಿಸಿದ್ದಾರೆ.
 
ರವಿಶಾಸ್ತ್ರಿ ಇದೀಗ ಮೊದಲ ಲಸಿಕೆ ಪಡೆದುಕೊಂಡಿದ್ದು, ಸದ್ಯದಲ್ಲೇ ಎರಡನೇ ಲಸಿಕೆ ತೆಗೆದುಕೊಳ್ಳಲಿದ್ದಾರೆ. ಅಹಮ್ಮದಾಬಾದ್ ನ ಅಪೋಲೋ ಆಸ್ಪತ್ರೆಯಲ್ಲಿ ಲಸಿಕೆ ಪಡೆದುಕೊಂಡಿರುವುದಾಗಿ 58 ವರ್ಷದ ರವಿಶಾಸ್ತ್ರಿ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಇದರಲ್ಲಿ ಇನ್ನಷ್ಟು ಓದಿ :