ನವದೆಹಲಿ: ಇತ್ತೀಚೆಗೆ ಐಪಿಎಲ್ ಪಂದ್ಯದ ನಡುವೆ ಧೋನಿಗೆ ಅಭಿಮಾನಿಗಳು ತೋರಿಸುತ್ತಿರುವ ಪ್ರೀತಿ ಎಲ್ಲರಿಗೂ ಗೊತ್ತೇ ಇದೆ. ಇದೀಗ ಕೊಹ್ಲಿ ಅಭಿಮಾನಿಗಳಿಗೂ ಅದೇ ಚಾಳಿ ಅಂಟಿಕೊಂಡಿದೆ. ಪಂದ್ಯದ ನಡುವೆ ಧೋನಿ ಕಾಲು ಮುಟ್ಟಿ ನಮಸ್ಕರಿಸಲು ಅಭಿಮಾನಿಗಳು ಮುಗಿ ಬೀಳುತ್ತಿದ್ದಾರೆ. ನಿನ್ನೆ ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಕೊಹ್ಲಿಗೂ ಅಂತಹದ್ದೇ ಅನುಭವವಾಗಿದೆ.ಈ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿದ್ದ ವಿರಾಟ್ ಅಭಿಮಾನಿಗಳನ್ನು ರಂಜಿಸಿದ್ದರು. ಅವರು ಬ್ಯಾಟಿಂಗ್ ಮಾಡುತ್ತಿದ್ದಾಗ ಅಭಿಮಾನಿಯೊಬ್ಬ ಮೈದಾನಕ್ಕೆ ನುಗ್ಗಿ ಕೊಹ್ಲಿ ಕಾಲು