ಕೋಲ್ಕೊತ್ತಾ: ಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಅಂತಿಮ ದಿನ ಟೀಂ ಇಂಡಿಯಾ ಪಂದ್ಯ ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದೆ. ಕಮ್ ಬ್ಯಾಕ್ ಹಾದಿಯಲ್ಲಿದ್ದ ಟೀಂ ಇಂಡಿಯಾಕ್ಕೆ ಮತ್ತೆ ಸುರಂಗಾ ಲಕ್ಮಲ್ ಏಟು ಕೊಟ್ಟಿದ್ದಾರೆ. ಮೊದಲ ಇನಿಂಗ್ಸ್ ನಲ್ಲಿ ಭಾರತಕ್ಕೆ ಭಾರೀ ಆಘಾತ ನೀಡಿದ್ದ ಲಕ್ಮಲ್ ಮತ್ತೆ ದ್ವಿತೀಯ ಇನಿಂಗ್ಸ್ ನಲ್ಲಿ ಚೇತರಿಕೆಯ ಹಾದಿಯಲ್ಲಿದ್ದ ತಂಡಕ್ಕೆ ಆಘಾತ ನೀಡಿದ್ದಾರೆ. ಇದರ ಹೊರತಾಗಿಯೂ ನಾಯಕ ಕೊಹ್ಲಿ ಕ್ರೀಸ್ ನಲ್ಲಿದ್ದು, ಊಟದ ವಿರಾಮದ