ಮುಂಬೈ: ಟೀಂ ಇಂಡಿಯಾದಲ್ಲಿ ಇತ್ತೀಚೆಗಷ್ಟೇ ಕ್ಲಿಕ್ ಆಗುತ್ತಿರುವ ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಅಂಬಟಿ ರಾಯುಡು ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಹೇಳಿದ್ದಾರೆ.ಅಂಬಟಿ ಇದುವರೆಗೆ ಟೀಂ ಇಂಡಿಯಾ ಪರ ಟೆಸ್ಟ್ ಕ್ರಿಕೆಟ್ ಆಡಿಲ್ಲ. ಆದರೆ ದೇಶೀಯ ಪಂದ್ಯಗಳಲ್ಲಿ 97 ಪಂದ್ಯಗಳನ್ನಾಡಿದ್ದಾರೆ. ಇನ್ನು ಮುಂದೆ ಸುದೀರ್ಘ ಮಾದರಿಯ ಕ್ರಿಕೆಟ್ ನಲ್ಲಿ ಆಡದೇ ಇರಲು ಅವರು ತೀರ್ಮಾನಿಸಿದ್ದಾರೆ.ಮೊನ್ನೆಯಷ್ಟೇ ನಡೆದ ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಸರಣಿಯಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ಅಂಬಟಿ ರಾಯುಡು,