ದುಬೈ: ಏಷ್ಯಾ ಕಪ್ ಕ್ರಿಕೆಟ್ ಕೂಟದ ಮತ್ತೊಂದು ಸೂಪರ್ ಫೋರ್ ಹಂತದ ಪಂದ್ಯದಲ್ಲಿ ಟೀಂ ಇಂಡಿಯಾ ಇಂದು ಶ್ರೀಲಂಕಾ ವಿರುದ್ಧ ಪಂದ್ಯವಾಡಲಿದೆ.ಈಗಾಗಲೇ ಪಾಕಿಸ್ತಾನ ವಿರುದ್ಧ ಮೊದಲ ಪಂದ್ಯ ಸೋತಿರುವ ಟೀಂ ಇಂಡಿಯಾ ಇಂದಿನ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಭಾರತ ತಂಡಕ್ಕೆ ದೊಡ್ಡ ತಲೆನೋವಾಗಿರುವುದು ಬೌಲಿಂಗ್. ಬ್ಯಾಟಿಂಗ್ ಗೆ ಹೋಲಿಸಿದರೆ ಬೌಲಿಂಗ್ ದುರ್ಬಲವಾಗಿದೆ. ಕಳೆದ ಪಂದ್ಯದಲ್ಲಿ ಜ್ವರದಿಂದ ತಂಡದಿಂದ ಹೊರಗುಳಿದಿದ್ದ ಆವೇಶ್ ಖಾನ್ ಇಂದು ಮರಳುವ ಸಾಧ್ಯತೆಯಿದೆ. ಹೀಗಾದಲ್ಲಿ ದೀಪಕ್ ಹೂಡಾ