ಹ್ಯಾಂಗ್ ಝೂ: 19 ನೇ ಏಷ್ಯನ್ ಗೇಮ್ಸ್ ಪುರುಷರ ಕ್ರಿಕೆಟ್ ನಲ್ಲಿ ನೇಪಾಳ ತಂಡವನ್ನು 23 ರನ್ ಗಳಿಂದ ಸೋಲಿಸಿದ ಟೀಂ ಇಂಡಿಯಾ ಸೆಮಿಫೈನಲ್ ಗೆ ಪ್ರವೇಶ ಪಡೆದಿದೆ.ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಋತುರಾಜ್ ಗಾಯಕ್ ವಾಡ್ ಬಳಗ ಮೊದಲು ಬ್ಯಾಟಿಂಗ್ ನಡೆಸಿ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 202 ರನ್ ಗಳಿಸಿತ್ತು.ನೇಪಾಳವೂ ಈ ಮೊತ್ತವನ್ನು ಉತ್ತಮವಾಗಿಯೇ ಬೆನ್ನತ್ತಿತ್ತು. ಆದರೆ ನಿಯಮಿತವಾಗಿ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿದ್ದರಿಂದ ಅಂತಿಮವಾಗಿ 20