ಅಡಿಲೇಡ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ದ್ವಿತೀಯ ದಿನದ ಊಟದ ವಿರಾಮದ ವೇಳೆಗೆ ಆಸ್ಟ್ರೇಲಿಯಾ ಎರಡು ವಿಕೆಟ್ ನಷ್ಟಕ್ಕೆ 35 ರನ್ ಗಳಿಸಿದೆ. ಭಾರತ ಮೊದಲ ಇನಿಂಗ್ಸ್ ನಲ್ಲಿ 244 ಕ್ಕೆ ಆಲೌಟ್ ಆಗಿದೆ. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾಕ್ಕೆ ವೇಗಿ ಜಸ್ಪ್ರೀತ್ ಬುಮ್ರಾ ಆರಂಭದಲ್ಲೇ ಎರಡು ವಿಕೆಟ್ ಕಬಳಿಸಿ ಆಘಾತ ನೀಡಿದ್ದಾರೆ. ಆಸ್ಟ್ರೇಲಿಯಾ ಪರ ಮಾರ್ನಸ್ ಲಬುಶೇನ್ 16 ರನ್ ಗಳಿಸಿದ್ದು,