ಬೆಂಗಳೂರು: ಕರ್ನಾಟಕದ ಹೆಮ್ಮೆಯ ವೇಗಿ ಜಾವಗಲ್ ಶ್ರೀನಾಥ್ ಒಂದು ಕಾಲದಲ್ಲಿ ಟೀಂ ಇಂಡಿಯಾದ ವೇಗದ ಬೌಲಿಂಗ್ ಪಡೆಯ ನೊಗ ಹೊತ್ತವರು. ಆದರೆ ಅವರ ಸಾಧನೆಗೆ ತಕ್ಕ ಮನ್ನಣೆ ಅವರಿಗೆ ಸಿಕ್ಕಿಲ್ಲ. ಇದೀಗ ಅವರಿಗೆ ಪದ್ಮ ಶ್ರೀ ಪ್ರಶಸ್ತಿ ಸಿಗಬೇಕೆಂದು ಕ್ರಿಕೆಟಿಗ ದೊಡ್ಡ ಗಣೇಶ್ ಸೇರಿದಂತೆ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಅಭಿಯಾನ ಶುರು ಮಾಡಿದ್ದಾರೆ.ಈ ಬಗ್ಗೆ ಪ್ರಧಾನಿ ಕಾರ್ಯಾಲಯ, ಮುಖ್ಯಮಂತ್ರಿ ಯಡಿಯೂರಪ್ಪ, ವಿಪಕ್ಷ ನಾಯಕರಾದ ಸಿದ್ಧರಾಮಯ್ಯ, ಎಚ್ ಡಿ ಕುಮಾರಸ್ವಾಮಿ ಸೇರಿದಂತೆ