ಸೌಥಾಂಪ್ಟನ್: ನ್ಯೂಜಿಲೆಂಡ್ ವಿರುದ್ಧ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಸೋಲಿನ ಬಳಿಕ ಟೀಂ ಇಂಡಿಯಾ ಆಟಗಾರರಲ್ಲಿ ಭಾರೀ ಬದಲಾವಣೆಯಾಗುವ ಸಾಧ್ಯತೆಯಿದೆ.ಇತ್ತೀಚೆಗೆ ಟೆಸ್ಟ್ ಕ್ರಿಕೆಟ್ ನಲ್ಲಿ ಟೀಂ ಇಂಡಿಯಾ ರನ್ ಬರ ಎದುರಿಸುತ್ತಿದೆ. ಅದರ ಜೊತೆಗೆ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ಕೂಡಾ ವಿಕೆಟ್ ಕೀಳಲು ಮರೆತಿದ್ದಾರೆ. ಹೀಗಾಗಿ ಹೊಸಬರಿಗೆ ಮಣೆ ಹಾಕುವ ಮೂಲಕ ತಂಡದಲ್ಲಿ ಭಾರೀ ಬದಲಾವಣೆಯಾದರೂ ಅಚ್ಚರಿಯಿಲ್ಲ.ಇನ್ನೀಗ, ಭಾರತ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿ ಆಡಬೇಕಿದ್ದು, ಈ