ಜೊಹಾನ್ಸ್ ಬರ್ಗ್: ಭಾರತ ಮತ್ತು ದ.ಆಫ್ರಿಕಾ ನಡುವೆ ಇಂದು ನಡೆಯಲಿರುವ ಟಿ20 ಪಂದ್ಯದಲ್ಲಿ ಕೆಲವು ಬದಲಾವಣೆಗಳು ಖಚಿತವಾಗಿದೆ.ಕಳೆದ ಪಂದ್ಯ ಸೋತಿರುವ ಟೀಂ ಇಂಡಿಯಾ ಈ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಈ ಪಂದ್ಯವನ್ನು ಸೋತರೆ ಸರಣಿ ಕಳೆದುಕೊಳ್ಳಬೇಕಾಗುತ್ತದೆ. ಹೀಗಾಗಿ ಟೀಂ ಇಂಡಿಯಾ ಅತ್ಯುತ್ತಮ ತಂಡವನ್ನೇ ಕಣಕ್ಕಿಳಿಸಬೇಕಾಗುತ್ತದೆ.ನಾಯಕನಾಗಿ ಸೂರ್ಯಕುಮಾರ್ ಸ್ವತಃ ತಾವೇ ಬ್ಯಾಟಿಂಗ್ ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಆದರೆ ಕಳೆದ ಪಂದ್ಯದಲ್ಲಿ ಆರಂಭಿಕರು ವಿಫಲರಾಗಿದ್ದರು. ಹೀಗಾಗಿ ಯಶಸ್ವಿ ಜೈಸ್ವಾಲ್ ಸ್ಥಾನಕ್ಕೆ ಇಶಾನ್