ಕೊರೋನಾ ಇಫೆಕ್ಟ್: ಸಿಡ್ನಿ ಮೈದಾನದಲ್ಲಿ ಪ್ರೇಕ್ಷಕರ ಸಂಖ್ಯೆ ಇಳಿಕೆ

ಸಿಡ್ನಿ| Krishnaveni K| Last Modified ಮಂಗಳವಾರ, 5 ಜನವರಿ 2021 (09:03 IST)
ಸಿಡ್ನಿ: ಕೊರೋನಾ ಪ್ರಕರಣ ಕಂಡುಬಂದಿರುವ ಹಿನ್ನಲೆಯಲ್ಲಿ ಸಿಡ್ನಿ ಮೈದಾನದಲ್ಲಿ ನಡೆಯಲಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯಕ್ಕೆ ಪ್ರೇಕ್ಷಕರ ಹಾಜರಾತಿಯಲ್ಲಿ ಶೇ.25 ರಷ್ಟು ಕಡಿತವಾಗಲಿದೆ.

 
ಈ ಮೊದಲು ಶೇ. 50 ಪ್ರೇಕ್ಷಕರಿಗೆ ಅವಕಾಶ ಕಲ್ಪಿಸಲಾಗಿತ್ತು. ಆದರೆ ಇದೀಗ ಶೇ. 25 ಕ್ಕೆ ಇಳಿಕೆ ಮಾಡಲಾಗಿದೆ. ಅಂದರೆ 10 ಸಾವಿರ ಪ್ರೇಕ್ಷಕರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಕೊರೋನಾ ಹಿನ್ನಲೆಯಲ್ಲಿ ಕ್ರಿಕೆಟಿಗರು, ಸಹಾಯಕ ಸಿಬ್ಬಂದಿ ಮಾತ್ರವಲ್ಲದೆ, ವೀಕ್ಷಕ ವಿವರಣೆಕಾರರು, ಮೈದಾನದ ಸಿಬ್ಬಂದಿ ಸೇರಿದಂತೆ ಎಲ್ಲರನ್ನೂ ಕ್ವಾರಂಟೈನ್ ಗೊಳಪಡಿಸಲಾಗಿದೆ.
ಇದರಲ್ಲಿ ಇನ್ನಷ್ಟು ಓದಿ :