ಮೆಲ್ಬೋರ್ನ್: ಆಸ್ಟ್ರೇಲಿಯಾ ಮತ್ತು ಭಾರತ ನಡುವೆ ಮೆಲ್ಬೋರ್ನ್ ಮೈದಾನದಲ್ಲಿ ನಡೆಯುತ್ತಿರುವ ತೃತೀಯ ಟೆಸ್ಟ್ ಪಂದ್ಯದಲ್ಲಿ ಅತಿಥೇಯ ತಂಡದ ಅಭಿಮಾನಿಗಳ ವರ್ತನೆ ಮಿತಿ ಮೀರಿದೆ.ಭಾರತೀಯ ಆಟಗಾರರ ವಿರುದ್ಧ ಜನಾಂಗೀಯ ನಿಂದನೆ ಮಾಡುವಂತೆ ಮೂದಲಿಸುವುದು, ಹೀಯಾಳಿಸುವುದು ಮಾಡುತ್ತಿರುವ ಬಗ್ಗೆ ವರದಿಗಳು ಬಂದಿವೆ. ಈ ಹಿನ್ನಲೆಯಲ್ಲಿ ಕ್ರಿಕೆಟ್ ಆಸ್ಟ್ರೇಲಿಯಾ ಮೆಲ್ಬೋರ್ನ್ ಪ್ರೇಕ್ಷಕರಿಗೆ ಎಚ್ಚರಿಕೆ ನೀಡಿದೆ.ಮೊದಲ ಎರಡು ದಿನ ಭಾರತೀಯ ಕ್ರಿಕೆಟಿಗರು ಮತ್ತು ಅಭಿಮಾನಿಗಳ ವಿರುದ್ಧ ಆಸ್ಟ್ರೇಲಿಯಾ ಅಭಿಮಾನಿಗಳು ಜನಾಂಗೀಯ ನಿಂದನೆ ಮಾಡಿರುವ ವಿಡಿಯೋ ಸಾಕ್ಷ್ಯಗಳು