ಅಹಮ್ಮದಾಬಾದ್: ಐಸಿಸಿ ಏಕದಿನ ವಿಶ್ವಕಪ್ ನಲ್ಲಿ ದ.ಆಫ್ರಿಕಾ ವಿರುದ್ಧ 5 ವಿಕೆಟ್ ಗಳ ಸೋಲು ಕಂಡ ಅಫ್ಘಾನಿಸ್ತಾನ ಟೂರ್ನಿಯಿಂದ ಅಧಿಕೃತವಾಗಿ ಹೊರಬಿದ್ದಿದೆ.ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ 50 ಓವರ್ ಗಳಲ್ಲಿ 244 ರನ್ ಗಳಿಗೆ ಆಲೌಟ್ ಆಗಿತ್ತು. ಈ ಮೊತ್ತ ಬೆನ್ನತ್ತಿದ ಆಫ್ರಿಕಾ 47.3 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 247 ರನ್ ಗಳಿಸಿ ಗೆಲುವು ಪಡೆಯಿತು. ಇದರೊಂದಿಗೆ ಆಫ್ರಿಕಾ ಎರಡನೇ ಸ್ಥಾನದೊಂದಿಗೆ ಲೀಗ್ ಹಂತದ ಪಂದ್ಯ ಮುಗಿಸಿತು.