ಕೋಲ್ಕೊತ್ತಾ: ಐಸಿಸಿ ಏಕದಿನ ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ಇಂದು ದಕ್ಷಿಣ ಆಫ್ರಿಕಾ ವಿರುದ್ಧ ಪಂದ್ಯವಾಡುತ್ತಿದ್ದು, ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದು ಶುಭಾರಂಭ ಮಾಡಿದೆ.ಟಾಸ್ ಗೆದ್ದ ರೋಹಿತ್ ಪಡೆ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಈಡನ್ ಗಾರ್ಡನ್ ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ತಂಡಕ್ಕೆ ಅನುಕೂಲ ಹೆಚ್ಚು. ಹೀಗಾಗಿ ರೋಹಿತ್ ಪ್ರಬಲ ತಂಡದ ಎದುರು ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.ಈ ಪಂದ್ಯದಲ್ಲಿ ಟೀಂ ಇಂಡಿಯಾ ಆಡುವ ಬಳಗದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.