ಧರ್ಮಶಾಲಾ: ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಇಂದು ಎರಡು ಮಹತ್ವದ ಪಂದ್ಯಗಳು ನಡೆಯಲಿವೆ. ಧರ್ಮಶಾಲಾದಲ್ಲಿ ಆಸ್ಟ್ರೇಲಿಯಾ-ನ್ಯೂಜಿಲೆಂಡ್ ನಡುವೆ ಮತ್ತು ಕೋಲ್ಕೊತ್ತಾದಲ್ಲಿ ಬಾಂಗ್ಲಾ-ನೆದರ್ಲ್ಯಾಂಡ್ಸ್ ನಡುವೆ ಪಂದ್ಯ ನಡೆಯಲಿದೆ.ಆಸ್ಟ್ರೇಲಿಯಾಗೆ ಈಗ ಸೆಮಿಫೈನಲ್ ಹಾದಿಯನ್ನು ಜೀವಂತವಾಗಿರಿಸಲು ಇಂದಿನ ಪಂದ್ಯವನ್ನು ಗೆಲ್ಲಲೇಬೇಕಿದೆ. ಅತ್ತ ಸೋಲಿಲ್ಲದೇ ಮೆರೆಯುತ್ತಿದ್ದ ನ್ಯೂಜಿಲೆಂಡ್ ಕಳೆದ ಪಂದ್ಯದಲ್ಲಿ ಇದೇ ಮೈದಾನದಲ್ಲಿ ಟೀಂ ಇಂಡಿಯಾ ವಿರುದ್ಧ ಕಂಡ ಸೋಲನ್ನು ಮರೆತು ಅಗ್ರ ಸ್ಥಾನಕ್ಕಾಗಿ ಪೈಪೋಟಿ ನಡೆಸಲಿದೆ. ಈ ಪಂದ್ಯ ಬೆಳಿಗ್ಗೆ 10.30 ಕ್ಕೆ ಆರಂಭವಾಗಲಿದೆ.ಇನ್ನೊಂದು